LOADING

ಹುಡುಕಲು ಟೈಪ್ ಮಾಡಿ

ನ್ಯಾಯಾಂಗ ಮನೆಯಂಗಳದಲ್ಲಿ ಮಾತುಕತೆ

ಶ್ರೀ ನಿಟ್ಟೂರು ಶ್ರೀನಿವಾಸರಾವ್

ಕನ್ನಡ ನಾಡಿನ ಸಾರಸ್ವರ, ಸಾಂಸ್ಕೃತಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಕ್ರಿಯಾಶೀಲರಾಗಿ ಭಾಗವಹಿಸುತ್ತಿರುವ ಹಿರಿಯ ಸಾಂಸ್ಕೃತಿಕ ಚೇತನ ನ್ಯಾಯಮೂರ್ತಿ ಶ್ರೀ ನಿಟ್ಟೂರು ಶ್ರೀನಿವಾಸರಾವ್ ಅವರು.
ಬೆಂಗಳೂರಿನಲ್ಲಿ ೧೯೦೩ರಲ್ಲಿ ಜನಿಸಿದ ಶ್ರೀಯುತರು ಮೈಸೂರು ವಿಶ್ವವಿದ್ಯಾನಿಲಯದಿಂದ ವಿಜ್ಞಾನದಲ್ಲಿ ಸ್ನಾತಕ ಪದವಿಯನ್ನು, ಮದರಾಸು ವಿಶ್ವವಿದ್ಯಾನಿಲಯದಿಂದ ಕಾನೂನು ಪದವಿಯನ್ನು ಪಡೆದು ವಕೀಲ ವೃತ್ತಿಯನ್ನು ಕೈಗೊಂಡರು. ಅನಂತರ ಅಡ್ವಕೇಟ್ ಜನರಲ್ ಆಗಿ, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ನೇಮಕಗೊಂಡರು.ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ನಿವೃತ್ತರಾದ ಅವರು ಕರ್ನಾಟಕದ ಪ್ರಥಮ ವಿಜಿಲೆನ್ಸ್ ಆಗಿದ್ದರು.ಭಾರತ ರಾಷ್ಟ್ರೀಯ ಕಾಂಗ್ರೆಸ್ನ ಸದಸ್ಯರಾಗಿದ್ದು ೧೯೩೦, ೧೯೩೨,೧೯೪೨ರ ಸ್ವಾತಂತ್ರ್ಯ ಚಳುವಳಿಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದವರು.ಅವರದು ಅಚ್ಚ ಕನ್ನಡಾಭಿಮಾನ. ಅವರು ಪ್ರಭಾರಿ ರಾಜ್ಯಪಾಲರಾಗಿದ್ದಾಗ ಗಣರಾಜ್ಯೋತ್ಸವದಲ್ಲಿ ಕನ್ನಡದಲ್ಲಿ ಭಾಷಣ ಮಾಡಿದ ಪ್ರಥಮರು.೧೯೨೮ರಷ್ಟು ಹಿಂದೆಯೇ ‘ಸತ್ಯಶೋಧನ ಪ್ರಕಟನ ಮಂದಿರ’ ಪ್ರಾರಂಭಿಸಿ ಕನ್ನಡ ನವೋದಯ ಕಾಲದ ಕವಿಗಳ, ಲೇಖಕರ ಕೃತಿಗಳನ್ನು ಪ್ರಕಟಿಸಿದ್ದಾರೆ.ತರುಣರನ್ನು ಬರೆಯಲು ಪ್ರೋತ್ಸಾಹಿಸಿದ್ದಾರೆ.ಕಲಾವಿದರಿಗೆ ಪ್ರೋತ್ಸಾಹ ನೀಡಿದ್ದಾರೆ.ಕನ್ನಡ ಸಾಹಿತ್ಯ ಪರಿಷತ್ತು ಪ್ರಾರಂಭವಾದಾಗಿನಿಂದ ಅದರ ಕಾರ್ಯಗಳಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.ಕರ್ನಾಟಕ ಹಾಗೂ ಭಾರತದ ಸಂಸ್ಕೃತಿ ಶ್ರೇಷ್ಠರ ಸ್ನೇಹವಲಯ ಅವರದು.ಶ್ರೀಯುತರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು.
ಕರ್ನಾಟಕದ ಅಭಿವೃದ್ಧಿಗೆ ಸಾಕ್ಷಿ ಪ್ರಜ್ಞೆಯಾಗಿರುವ ಜ್ಞಾನವೃದ್ಧರೂ ಆದವರು ನ್ಯಾಯಮೂರ್ತಿ ಶ್ರೀ ನಿಟ್ಟೂರು ಶ್ರೀನಿವಾಸರಾವ್ ಅವರು.

ಟ್ಯಾಗ್‌ಗಳು:

ನಿಮಗೆ ಇದೂ ಇಷ್ಟವಾಗಬಹುದು:

ಕಮೆಂಟ್ ಮಾಡಿ

ನಿಮ್ಮ ಇಮೇಲ್ ವಿಳಾಸವನ್ನು ಪ್ರಕಟಿಸಲಾಗುವುದಿಲ್ಲ. ಅಗತ್ಯ ಕ್ಷೇತ್ರಗಳನ್ನು ಗುರುತಿಸಲಾಗಿದೆ *